ಭದ್ರಾವತಿ:

ಪಂಚರಾಜ್ಯ ಚುನಾವಣಾ ಫಲಿತಾಂಶದ ಹಿನ್ನೆಲೆದಲ್ಲಿ ಭದ್ರಾವತಿ ನಗರ ಹಾಗೂ ಗ್ರಾಮಾಂತರ ಮಂಡಲ ಬಿಜೆಪಿ ವತಿಯಿಂದ ಪಕ್ಷದ ಕಚೇರಿಯಲ್ಲಿ ಫಲಿತಾಂಶ ವೀಕ್ಷಣೆ ಮಾಡಲಾಯಿತು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ ಅವರು ನಗರ ಮಂಡಲ ಅಧ್ಯಕ್ಷ ಧರ್ಮಪ್ರಸಾದ್ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಹೆಚ್. ತೀರ್ಥಯ್ಯ ಅವರ ನೇತೃತ್ವದಲ್ಲಿ ಕಾರ್ಯಕರ್ತರೊಂದಿಗೆ ಫಲಿತಾಂಶವನ್ನು ವೀಕ್ಷಿಸಿದರು.ಫಲಿತಾಂಶ ಹೊರಬಂದ ನಂತರ ಬಿಜೆಪಿ ಕಾರ್ಯಕರ್ತರು ಕಚೇರಿಯಿಂದ ಬೈಕ್ ರ‍್ಯಾಲಿ ನಡೆಸಿದರು.

ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ, ಹಳೆ ಸೇತುವೆ ಮಾರ್ಗವಾಗಿ ಮಾಧವಾಚಾರ್ ಸರ್ಕಲ್‌ನಿಂದ ರಂಗಪ್ಪ ಸರ್ಕಲ್ ವರೆಗೆ ರ‍್ಯಾಲಿ ಸಾಗಿತು. ಈ ವೇಳೆ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯ ಸಾಧನೆಯನ್ನು ಸಂಭ್ರಮಿಸಿದರು.ಈ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಮಂಗೋಟೆ ರುದ್ರೇಶ್, ಕೂಡ್ಲಿಗೆರೆ ಹಾಲೇಶ್, ಮಂಜುನಾಥ್ ಎಂ., ರಾಮಲಿಂಗಯ್ಯ, ಜಿಲ್ಲಾ ಕಾರ್ಯದರ್ಶಿ ಸರಸ್ವತಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚೆನ್ನೇಶ್, ರಘುರಾವ್, ಮೊಸರಳ್ಳಿ ಅಣ್ಣಪ್ಪ, ಹನುಮಂತ ನಾಯಕ್, ರಾಜ್ಯ ಮಾಧ್ಯಮ ಪ್ರಮುಖರಾದ ಅವಿನಾಶ್, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಗೌಡರ್, ಸುಬ್ಬಣ್ಣ ಸೇರಿದಂತೆ ಮಹಿಳಾ ಪ್ರಮುಖರಾದ ಅನ್ನಪೂರ್ಣ, ಶಕುಂತಲಾ ಪ್ರದೀಪ್, ನಾಗಮಣಿ, ಲತಾ ಪ್ರಭಾಕರ್, ಆಶಾ ಪುಟ್ಟಸ್ವಾಮಿ, ಉಷಾ ವೀರಶೇಖರ್ ಹಾಗೂ ಉಮಾವತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *