ಭೇಟಿಯ ವೇಳೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಕುರುವಳ್ಳಿ ನಾಗರಾಜ್, ಯಡೂರು ವಿಶ್ವನಾಥ್, ಅರ್ಜುನ್ ಗೌಡ, ಮಳೂರು ಶ್ರೀಕಾಂತ್, ಬೆಟ್ಟಮಕ್ಕಿ ನಾಗೇಶ್, ಮೇಳಿಗೆ ನಾಗೇಶ್, ಶನತ್ ಗೌಡ ಕೊಳವಾಡಿ, ಕಾರ್ತಿಕ್ ಅಂಜನ್ ಹೆಗಡೆ ಹಾಗೂ ಬೆಳ್ಳೂರು ಕಾರ್ತಿಕ್ ಉಪಸ್ಥಿತರಿದ್ದರು.

ಮುಖಂಡರು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸುವುದರೊಂದಿಗೆ ಶಿವಮೊಗ್ಗ ಜಿಲ್ಲೆಯ ಪಕ್ಷ ಸಂಘಟನೆ, ಯುವಕರ ಸಬಲೀಕರಣ ಹಾಗೂ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು. ಬಿ.ಕೆ. ಹರಿಪ್ರಸಾದ್ ಅವರ ಅನುಭವ ಮತ್ತು ನಾಯಕತ್ವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ನೀಡಲಿದೆ ಎಂಬ ವಿಶ್ವಾಸವನ್ನು ಮುಖಂಡರು ವ್ಯಕ್ತಪಡಿಸಿದರು.

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾದ ಈ ನೇಮಕಾತಿಯಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದ್ದು, ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು.