ಆರಂಭದಿಂದಲೂ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುತ್ತಿರುವುದು ಅವರ ಸೇವಾ ಮನೋಭಾವಕ್ಕೆ ಸಾಕ್ಷಿಯಾಗಿದೆ.ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಡಾ. ಚಂದ್ರಶೇಖರ್ ಅವರು ಆಸ್ಪತ್ರೆಯನ್ನು ಕೇವಲ ಚಿಕಿತ್ಸಾ ಕೇಂದ್ರವನ್ನಾಗಿಸದೇ, ಜನಸೇವೆಯ ಕೇಂದ್ರವನ್ನಾಗಿ ರೂಪಿಸಿದ್ದಾರೆ. ಇದರ ಭಾಗವಾಗಿ ಪ್ರತಿ ಗುರುವಾರ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿದ್ದು, ಈ ಕಾರ್ಯಕ್ರಮ ಸಾರ್ವಜನಿಕರಿಂದ ಅಪಾರ ಮೆಚ್ಚುಗೆ ಪಡೆದಿದೆ.

ಈ ಉಚಿತ ಆರೋಗ್ಯ ಶಿಬಿರದಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್, ಸಿ-ಆರ್ಮ್ ಎಕ್ಸ್-ರೇ, ರಕ್ತದೊತ್ತಡ ಪರೀಕ್ಷೆ, ರಕ್ತದಲ್ಲಿನ ಸಕ್ಕರೆ ಪ್ರಮಾಣ (ಆರ್‌ಬಿಎಸ್) ಪರೀಕ್ಷೆ, ಇಸಿಜಿ ಹಾಗೂ ಇತರ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲಾಗುತ್ತದೆ. ಜೊತೆಗೆ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ಸಲಹೆಗಳನ್ನು ಸಹ ನೀಡಲಾಗುತ್ತಿದೆ.ಈ ಆರೋಗ್ಯ ಶಿಬಿರದ ಪ್ರಯೋಜನವನ್ನು ನರ್ಸ್‌ಗಳು, ಶಿಕ್ಷಕರು, ಛಾಯಾಗ್ರಾಹಕರು, ಬೀದಿಬದಿ ವ್ಯಾಪಾರಿಗಳು, ಎಎಸ್‌ಐ ಹಾಗೂ ಪೊಲೀಸ್ ಸಿಬ್ಬಂದಿ, ನಿವೃತ್ತ ಪೊಲೀಸ್ ಅಧಿಕಾರಿಗಳು, ಗೃಹರಕ್ಷಕ ದಳದ ಸಿಬ್ಬಂದಿ, ಪತ್ರಕರ್ತರು, ವ್ಯಾಪಾರಿಗಳು, ಕಟ್ಟಡ ಕಾರ್ಮಿಕರು, ಪೌರಕಾರ್ಮಿಕರು, ಉಜ್ಜೀವನ್ ಬ್ಯಾಂಕ್ ಸಿಬ್ಬಂದಿ ಹಾಗೂ ವಿವಿಧ ಬಡಾವಣೆಗಳ ಸಾವಿರಾರು ನಾಗರಿಕರು ಪಡೆದುಕೊಂಡಿದ್ದಾರೆ.

ಇದೀಗ ಗುರುವಾರ ಹಿರಿಯ ನಾಗರಿಕರಿಗಾಗಿ ವಿಶೇಷ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದ್ದು, ಪಟ್ಟಣದ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಈ ಸೌಲಭ್ಯದ ಸದುಪಯೋಗ ಪಡೆಯುವಂತೆ ಡಾ. ಚಂದ್ರಶೇಖರ್ ಮನವಿ ಮಾಡಿದ್ದಾರೆ.

ವೈದ್ಯಕೀಯ ವೃತ್ತಿಯನ್ನು ಕೇವಲ ಉದ್ಯೋಗವಾಗಿ ಕಾಣದೇ, ಸಮಾಜಸೇವೆಯ ಸಾಧನವಾಗಿ ಬಳಸುತ್ತಿರುವ ಡಾ. ಚಂದ್ರಶೇಖರ್ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ. ಅವರ ಸೇವಾ ಮನೋಭಾವ, ಬಡವರ ಪರ ಕಾಳಜಿ ಹಾಗೂ ಜನಪರ ಆರೋಗ್ಯ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಿವೆ.

ಅಲ್ಲದೆ, ತೃಪ್ತಿ ಹೆಲ್ತ್ ಕೇರ್ ಆಸ್ಪತ್ರೆಯ ಸೇವಾ ಚಟುವಟಿಕೆಗಳನ್ನು ಮೆಚ್ಚಿ ಅನೇಕ ಗಣ್ಯರು, ಸಮಾಜಮುಖಿ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಆಸ್ಪತ್ರೆ ಭೇಟಿ ನೀಡಿ ಡಾ. ಚಂದ್ರಶೇಖರ್ ಅವರ ಕಾರ್ಯವನ್ನು ಕೊಂಡಾಡಿದ್ದಾರೆ. ಆರೋಗ್ಯ ಸೇವೆಯನ್ನು ಮಾನವೀಯ ಮೌಲ್ಯಗಳೊಂದಿಗೆ ಬೆಸೆಯುವ ಮೂಲಕ ಡಾ. ಚಂದ್ರಶೇಖರ್ ಅವರು ಶಿವಮೊಗ್ಗ ಜಿಲ್ಲೆಯ ಜನರ ವಿಶ್ವಾಸ ಗಳಿಸಿರುವುದು ಅವರ ಸಾಧನೆಯ ಮತ್ತೊಂದು ಮೈಲಿಗಲ್ಲಾಗಿದೆ.

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *