ರಿಪ್ಪನ್‌ಪೇಟೆ, ಜೂನ್ 10: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ, ಕೆರೆಹೋಬಳಿ ಮಹಾಶಕ್ತಿ ಕೇಂದ್ರದ ವತಿಯಿಂದ ರಿಪ್ಪನ್‌ಪೇಟೆಯ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ಆಯೋಜಿಸಲಾಯಿತು.ಕೇಂದ್ರ ಸರ್ಕಾರದ ಹನ್ನೆರಡು ವರ್ಷಗಳ ಅವಧಿಯಲ್ಲಿ ದೇಶವು ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿಯ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಹಾಗೂ ಅಭಿವೃದ್ಧಿಮುಖ ಆಡಳಿತವು ದೇಶದ ಪ್ರಗತಿಗೆ ಹೊಸ ದಿಕ್ಕನ್ನು ನೀಡಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು. ದೇಶದ ಸರ್ವತೋಮುಖ ಅಭಿವೃದ್ಧಿ ಹಾಗೂ ಸುಭದ್ರ ಆಡಳಿತ ಮುಂದುವರಿಯಲಿ ಎಂಬ ಆಶಯದೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು.ಬೆಳಿಗ್ಗೆ 9.30 ಗಂಟೆಗೆ ನಡೆದ ಈ ಕಾರ್ಯಕ್ರಮವು ಕೆರೆಹೋಬಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸುಂದರೇಶ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹೊಸನಗರ ತಾಲೂಕು ಬಿಜೆಪಿ ಉಪಾಧ್ಯಕ್ಷರಾದ ಮನಸೆ ಆನಂದ್, ಕೆರೆಹೋಬಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸುಂದರೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಸ್ವಾಮಿ, ಮಂಜುಳಾ ಕೆತಾರ್ಜಿರಾವ್, ಮಲ್ಲಿಕಾರ್ಜುನ್, ಪದ್ಮಾ ಸುರೇಶ್, ನಾಗರತ್ನ ದೇವರಾಜ್, ಕಗ್ಲಿ ಲಿಂಗಪ್ಪ, ಕುಕ್ಕಳಲೇ ಗಣೇಶ್, ಎಂ ಆರ್ ಭಟ್, ಸುಧೀ ಪೂಜಾರಿ ರಾಮು ಬಳೆಗಾರ ಸೇರಿದಂತೆ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ವಿಶ್ವ ಮಟ್ಟದಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಂಡು ಅಭಿವೃದ್ಧಿಯತ್ತ ದಾಪುಗಾಲಿಡುತ್ತಿದ್ದು, ಮುಂದಿನ ದಿನಗಳಲ್ಲಿಯೂ ದೇಶದ ಪ್ರಗತಿ ಪಥ ಮತ್ತಷ್ಟು ಬಲಗೊಳ್ಳಲಿ ಎಂಬ ಆಶಯವನ್ನು ಮುಖಂಡರು ವ್ಯಕ್ತಪಡಿಸಿದರು.

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *