ರಿಪ್ಪನ್‌ಪೇಟೆ, ಜೂನ್ 30: ರಿಪ್ಪನ್‌ಪೇಟೆ-ಶಿವಮೊಗ್ಗ ರಸ್ತೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಪಲ್ಟಿಯಾದ ಘಟನೆ ನಡೆದಿದೆ.

ದಾವಣಗೆರೆಯಿಂದ ಕುಂದಾಪುರದ ಕಡೆಗೆ ತೆರಳುತ್ತಿದ್ದ ಲಾರಿಯು ಮಧ್ಯರಾತ್ರಿ ಸುಮಾರು 12ರಿಂದ 1 ಗಂಟೆಯ ನಡುವೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮ ಲಾರಿಯಲ್ಲಿದ್ದ ಸಾವಿರಾರು ಮೊಟ್ಟೆಗಳು ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಅವುಗಳಲ್ಲಿ ಹೆಚ್ಚಿನ ಪ್ರಮಾಣದ ಮೊಟ್ಟೆಗಳು ಒಡೆದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.

ಅಪಘಾತದ ಪರಿಣಾಮ ಲಾರಿಯಲ್ಲಿದ್ದ ಸಾವಿರಾರು ಮೊಟ್ಟೆಗಳು ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಅವುಗಳಲ್ಲಿ ಹೆಚ್ಚಿನ ಪ್ರಮಾಣದ ಮೊಟ್ಟೆಗಳು ಒಡೆದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಹಾಗೂ ಸ್ಥಳೀಯರು ಆಗಮಿಸಿ ರಸ್ತೆ ಸಂಚಾರ ಸುಗಮಗೊಳಿಸುವ ಕಾರ್ಯ ಕೈಗೊಂಡರು. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *