ಹೊಸನಗರ, : ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಸಮೀಪದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಕರುವೊಂದನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡಲು ಯತ್ನಿಸಿದ್ದ ಪ್ರಕರಣವನ್ನು ಹೊಸನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣವು ಜೂನ್ 19, 2026ರಂದು ಬೆಳಕಿಗೆ ಬಂದಿತ್ತು. ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಹಸುವಿನ ಕರುವನ್ನು ಕೊಂದು ಅದರ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದರು. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯ ಸಿಪಿಸಿ 1609 ಶ್ರೀ ಗೋಪಾಲಕೃಷ್ಣ ಅವರ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 67/2026 ದಾಖಲಿಸಲಾಗಿತ್ತು.

ಪ್ರಕರಣದಲ್ಲಿ ಕರ್ನಾಟಕ ಗೋಹತ್ಯೆ ತಡೆ ಹಾಗೂ ದನ ಸಂರಕ್ಷಣಾ ಕಾಯ್ದೆ-2020ರ ಕಲಂ 4, 7 ಮತ್ತು 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು.

ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ತೀರ್ಥಹಳ್ಳಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಹೊಸನಗರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಎಂ.ಐ. ಗೌಡಪ್ಪಗೌಡ್ರ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು.

ಶಂಕರ್ ಗೌಡ ಪಾಟೀಲ್ , ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ, ನಗರ ಪೊಲೀಸ್ ಠಾಣೆಯ ಪಿಎಸ್‌ಐ ಶಿವಾನಂದ ವೈ.ಕೆ. ಸೇರಿದಂತೆ ಸಿಬ್ಬಂದಿ ಹಾಗೂ ಶಿವಮೊಗ್ಗ ಎಎನ್‌ಸಿ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಮಹಮದ್ ಸಲೀಂ ಬಾಳೂರ್ (34), .ಮಕಬುಲ್ ಅಹ್ಮದ್ ಬಡಿಗೇರ (22), ಸುಲೇಮಾನ್ ಕೋಲಾರಿ (26), .ಮಲಿಕ್ ರಿಹಾನ್ ಸುರಳೇಶ್ವರ (25), ಆಡೂರು ಗ್ರಾಮ, ಹಾನಗಲ್ ತಾಲ್ಲೂಕು, ಹಾವೇರಿ ಜಿಲ್ಲೆ.ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *