ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ದಕ್ಷ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚುಗೆ

ವಾರದ ಹಿಂದೆ ಗವಟೂರು ಹೊಳೆ ಸಮೀಪದ ಬಸ್ ನಿಲ್ದಾಣದಲ್ಲಿ ಅನಾಥವಾಗಿ ಪತ್ತೆಯಾಗಿದ್ದ ನವಜಾತ ಹೆಣ್ಣು ಶಿಶುವಿನ ಪ್ರಕರಣವನ್ನು ಅತ್ಯಂತ ಚಾಣಾಕ್ಷತನದಿಂದ ಭೇದಿಸಿರುವ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಅವರ ತಂಡದ ಕಾರ್ಯಾಚರಣೆಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಯಾವುದೇ ಸ್ಪಷ್ಟ ಸುಳಿವು ಇಲ್ಲದ ಪ್ರಕರಣವನ್ನು ಮೊಬೈಲ್ ಟವರ್ ಡಂಪ್ ಮಾಹಿತಿ, ತಾಂತ್ರಿಕ ಸಾಕ್ಷ್ಯಗಳು ಹಾಗೂ ರಹಸ್ಯ ಮಾಹಿತಿಗಳ ಆಧಾರದ ಮೇಲೆ ತನಿಖೆ ನಡೆಸಿ, ಕೇವಲ ಒಂದು ವಾರದಲ್ಲೇ ಆರೋಪಿಗಳನ್ನು ಪತ್ತೆಹಚ್ಚಿರುವುದು ಪೊಲೀಸರ ವೃತ್ತಿಪರತೆ ಮತ್ತು ದಕ್ಷತೆಗೆ ಸಾಕ್ಷಿಯಾಗಿದೆ.

ಈ ಕಾರ್ಯಾಚರಣೆಯಲ್ಲಿ ನವಜಾತ ಶಿಶುವಿನ ಜೀವ ಉಳಿಸಿ, ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿಯ ಕರ್ತವ್ಯನಿಷ್ಠೆ ಸಾರ್ವಜನಿಕರ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ.

ಮುಗ್ಧ ಕಂದಮ್ಮಗೆ ನ್ಯಾಯ ದೊರಕಿಸುವಲ್ಲಿ ಯಶಸ್ವಿಯಾದ ರಿಪ್ಪನ್‌ಪೇಟೆ ಪೊಲೀಸರಿಗೆ ಸಾರ್ವಜನಿಕರಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.”

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *