ಅಸಮರ್ಪಕ ವಿದ್ಯುತ್ ಪೂರೈಕೆ: ಬಾಳೂರು ಭಾಗದ ರೈತರ ಆಕ್ರೋಶ..!!

ರಿಪ್ಪನ್‌ಪೇಟೆ: ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಅತ್ಯವಶ್ಯಕವಾಗಿರುವ 3 ಫೇಸ್ ವಿದ್ಯುತ್ ನಿಗದಿತ ಸಮಯದಲ್ಲಿ ನಿರಂತರವಾಗಿ ಲಭ್ಯವಾಗದ ಪರಿಣಾಮ ಭತ್ತದ ಗದ್ದೆಗಳಿಗೆ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ಅಡಿಕೆ ತೋಟಗಳಿಗೂ ನೀರಿನ ಕೊರತೆ ಎದುರಾಗಿದ್ದು, ಬೆಳೆ ಹಾನಿಯಾಗುವ ಆತಂಕ ರೈತರನ್ನು ಕಾಡುತ್ತಿದೆ

ಈ ಹಿನ್ನೆಲೆಯಲ್ಲಿ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರು ಹಾಗೂ ಗ್ರಾಮಸ್ಥರು ಸೋಮವಾರ ಮೆಸ್ಕಾಂ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಒತ್ತಾಯಿಸಿದರು.

ಬಾಳೂರು ಭಾಗದ ಹಲವು ಗ್ರಾಮಗಳಲ್ಲಿ ನಿಗದಿಪಡಿಸಿರುವ ಅವಧಿಯಲ್ಲಿ 3 ಫೇಸ್ ವಿದ್ಯುತ್ ಸಮರ್ಪಕವಾಗಿ ದೊರೆಯುತ್ತಿಲ್ಲ. ವಿದ್ಯುತ್ ಇದ್ದರೂ ಪದೇಪದೇ ಕಡಿತಗೊಳ್ಳುತ್ತಿರುವುದರಿಂದ ಕೃಷಿ ಪಂಪ್‌ಸೆಟ್‌ಗಳನ್ನು ಕಾರ್ಯಾಚರಿಸಲು ಸಾಧ್ಯವಾಗುತ್ತಿಲ್ಲ. ಪರಿಣಾಮವಾಗಿ ಭತ್ತದ ಗದ್ದೆಗಳಿಗೆ ಅಗತ್ಯ ಪ್ರಮಾಣದಲ್ಲಿ ನೀರು ಪೂರೈಸಲು ಸಾಧ್ಯವಾಗದೆ ಬೆಳೆ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ಅಡಿಕೆ ತೋಟಗಳ ಸ್ಥಿತಿಯೂ ಚಿಂತಾಜನಕವಾಗಿದೆ. ನೀರಾವರಿ ವ್ಯವಸ್ಥೆಯನ್ನೇ ಅವಲಂಬಿಸಿರುವ ಅಡಿಕೆ ತೋಟಗಳಿಗೆ ನಿರಂತರ ನೀರು ಪೂರೈಸಲು ಸಾಧ್ಯವಾಗದ ಕಾರಣ ಗಿಡಗಳು ಒಣಗುವ ಆತಂಕ ಎದುರಾಗಿದೆ. ಕೃಷಿ ಬೆಳೆಗಳ ಮೇಲೆ ನೇರ ಪರಿಣಾಮ ಬೀರುತ್ತಿರುವ ವಿದ್ಯುತ್ ಸಮಸ್ಯೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಮನವಿ ಸಲ್ಲಿಸುವ ಸಂದರ್ಭದಲ್ಲಿ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಗ್ರಾಮಸ್ಥರು ಹಾಗೂ ಅಧಿಕಾರಿಗಳ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೇ ವಿದ್ಯುತ್ ಪೂರೈಕೆಯಲ್ಲಿ ಪದೇಪದೇ ವ್ಯತ್ಯಯವಾಗುತ್ತಿರುವುದಕ್ಕೆ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

“ನೆವಟೂರು ದಾಟಿದ ಬಳಿಕ ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ 3 ಫೇಸ್ ವಿದ್ಯುತ್ ಸಮರ್ಪಕವಾಗಿ ಪೂರೈಕೆಯಾಗುತ್ತಿದೆ. ರಿಪ್ಪನ್‌ಪೇಟೆ ಪಟ್ಟಣದಿಂದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರಂಭದವರೆಗೂ ವಿದ್ಯುತ್ ವ್ಯವಸ್ಥೆ ಸರಿಯಾಗಿರುವಾಗ, ನಮ್ಮ ಭಾಗಕ್ಕೆ ಮಾತ್ರ ಏಕೆ ಈ ರೀತಿಯ ಸಮಸ್ಯೆ?” ಎಂದು ಗ್ರಾಮಸ್ಥರು ಪ್ರಶ್ನಿಸಿದರು.

“ನಮ್ಮ ಭಾಗದ ರೈತರಿಗೆ ಮಾತ್ರ ಮಲತಾಯಿ ಧೋರಣೆ ಏಕೆ? ವಿದ್ಯುತ್ ಪೂರೈಕೆಯಲ್ಲಿ ಆಗುತ್ತಿರುವ ವ್ಯತ್ಯಯಕ್ಕೆ ಶಾಶ್ವತ ಪರಿಹಾರ ಯಾವಾಗ?” ಎಂದು ಅಧಿಕಾರಿಗಳ ಬಳಿ ಪ್ರಶ್ನಿಸಿ ಅಸಮಾಧಾನ ಹೊರಹಾಕಿದರು.

ಮನೆಗಳ ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯ

ವಿದ್ಯುತ್ ಸಮಸ್ಯೆ ಕೃಷಿ ಪಂಪ್‌ಸೆಟ್‌ಗಳಿಗೆ ಮಾತ್ರ ಸೀಮಿತವಾಗಿಲ್ಲ. ಬಾಳೂರು ಭಾಗದ ಹಲವು ಗ್ರಾಮಗಳಲ್ಲಿ ಮನೆಗಳಿಗೂ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.ಪದೇಪದೇ ವಿದ್ಯುತ್ ಕಡಿತವಾಗುತ್ತಿರುವುದರಿಂದ ರಾತ್ರಿ ವೇಳೆ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ.

ಗ್ರಾಮೀಣ ಪ್ರದೇಶದ ಜನರು ಮೂಲಭೂತ ವಿದ್ಯುತ್ ಸೌಲಭ್ಯಕ್ಕಾಗಿ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

ಓವರ್‌ಲೋಡ್ ಸಮಸ್ಯೆ ಪರಿಹರಿಸಲು ಒತ್ತಾಯ

ಬಾಳೂರು ಭಾಗದಲ್ಲಿ ವಿದ್ಯುತ್ ಸಮಸ್ಯೆಗೆ ಓವರ್‌ಲೋಡ್ ಕೂಡ ಪ್ರಮುಖ ಕಾರಣವಾಗಿದ್ದು, ಇದನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಅಗತ್ಯವಿರುವ ಕಡೆಗಳಲ್ಲಿ ವಿದ್ಯುತ್ ಪರಿವರ್ತಕಗಳ ಸಾಮರ್ಥ್ಯ ಹೆಚ್ಚಿಸುವುದು ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ನಿಗದಿತ ಸಮಯದಲ್ಲಿ ಕನಿಷ್ಠ ನಿರಂತರವಾಗಿ 3 ಫೇಸ್ ವಿದ್ಯುತ್ ಪೂರೈಕೆ ಮಾಡಬೇಕು. ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ರೀತಿಯಲ್ಲಿ ವಿದ್ಯುತ್ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದರು.

ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಅನುಪಸ್ಥಿತಿಯಲ್ಲಿ ಮನವಿ ಸ್ವೀಕರಿಸಿದ ಮೆಸ್ಕಾಂ ಶಾಖೆಯ ಮೇಲ್ವಿಚಾರಕ ಬಿ.ಎಂ. ಕೃಷ್ಣಪ್ಪ ಅವರು ಗ್ರಾಮಸ್ಥರ ಸಮಸ್ಯೆಗಳನ್ನು ಮೇಲಧಿಕಾರಿಗಳ ಗಮನಕ್ಕೆ ತಂದು, ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ವಿನಯ್ ಬಾಳೂರು, ಸಚಿನ್, ರಾಘು, ನಾಗರಾಜ್ ರಟ್ಟಳ್ಳಿ, ಮಂಜು ಆರ್., ಮಹೇಶ್, ರಮೇಶ್, ಸತೀಶ್, ಅರುಣ್, ರಾಕೇಶ್, ರಾಜು ಕಾಳೇಶ್ವರ, ಭರತ್ ಚಂಡಲದಿಂಬ, ಶಿವಾನಂದ ಸೇರಿದಂತೆ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

  • Anjan Kerehalli

    ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

    Related Posts

    ಕೆಂಚನಾಲ ತಾ.ಪಂ. ಕ್ಷೇತ್ರ ಸಾಮಾನ್ಯ ಮೀಸಲು: ಬಿಜೆಪಿ ಟಿಕೆಟ್‌ಗೆ ಎನ್. ವಿನಯ್ ಬಾಳೂರು ಆಕಾಂಕ್ಷೆ; ಸ್ಥಳೀಯ ಯುವ ನಾಯಕನಿಗೆ ಅವಕಾಶದ ನಿರೀಕ್ಷೆ…!!?

    ರಿಪ್ಪನ್‌ಪೇಟೆ: ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಸ್ಥಳೀಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೊಸನಗರ ತಾಲೂಕು ವ್ಯಾಪ್ತಿಯ ಕೆಂಚನಾಲ ತಾಲೂಕು ಪಂಚಾಯಿತಿ ಕ್ಷೇತ್ರ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಹಿನ್ನೆಲೆಯಲ್ಲಿ, ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ಸ್ಥಳೀಯ ಆಕಾಂಕ್ಷಿ ಎನ್. ವಿನಯ್ ಬಾಳೂರು…

    ಹಾವು ಕಡಿತದ ರೋಗಿ ರೆಫರ್: 108 ಆಂಬುಲೆನ್ಸ್ ವಿಚಾರದಲ್ಲಿ ಗೊಂದಲ…!!

    ತುರ್ತು ಸಂದರ್ಭದಲ್ಲಿ ರೋಗಿ ಸಾಗಾಟಕ್ಕೆ ನಿರಾಕರಣೆ ಆರೋಪ – ಸ್ಥಳೀಯರ ಆಕ್ರೋಶ ಹೊಸನಗರ: ಹಾವು ಕಡಿತಕ್ಕೊಳಗಾದ ರೈತನೊಬ್ಬನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರೆಫರ್ ಮಾಡಿದ ಸಂದರ್ಭದಲ್ಲಿ 108 ಆಂಬುಲೆನ್ಸ್ ಸೇವೆ ಕುರಿತು ಉಂಟಾದ ಗೊಂದಲದಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹೊಸನಗರ…

    Leave a Reply

    Your email address will not be published. Required fields are marked *

    You Missed

    ಕೆಂಚನಾಲ ತಾ.ಪಂ. ಕ್ಷೇತ್ರ ಸಾಮಾನ್ಯ ಮೀಸಲು: ಬಿಜೆಪಿ ಟಿಕೆಟ್‌ಗೆ ಎನ್. ವಿನಯ್ ಬಾಳೂರು ಆಕಾಂಕ್ಷೆ; ಸ್ಥಳೀಯ ಯುವ ನಾಯಕನಿಗೆ ಅವಕಾಶದ ನಿರೀಕ್ಷೆ…!!?

    ಅಸಮರ್ಪಕ ವಿದ್ಯುತ್ ಪೂರೈಕೆ: ಬಾಳೂರು ಭಾಗದ ರೈತರ ಆಕ್ರೋಶ..!!

    ಹಾವು ಕಡಿತದ ರೋಗಿ ರೆಫರ್: 108 ಆಂಬುಲೆನ್ಸ್ ವಿಚಾರದಲ್ಲಿ ಗೊಂದಲ…!!

    ವೈಭವೋಪೇತ ಹಿಂದೂ ದಿಗ್ವಿಜಯ ಯಾತ್ರೆ: ಸಹಕಾರ ನೀಡಿದ ಸಮಸ್ತ ಹಿಂದೂ ಸಮಾಜಕ್ಕೆ ಕೃತಜ್ಞತೆ..!

    ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಮುಂಭಾಗದಲ್ಲೇ ಎರಡು ಗೋವುಗಳು ಬಲಿ, ಎರಡು ಗೋವುಗಳಿಗೆ ಗಾಯ.!!

    PF ನೀತಿ ಬದಲಾವಣೆ ವಿರುದ್ಧ ಸಿಡಿದೆದ್ದ ಕಾರ್ಮಿಕರು; ಕೇಂದ್ರದ ಗಮನ ಸೆಳೆಯಲು ಹರತಾಳು ಹಾಲಪ್ಪ ಪ್ರಯತ್ನ!!