Malnad

Suddi Express

ರಿಪ್ಪನ್‌ಪೇಟೆಯಲ್ಲಿ ವಿದ್ಯುತ್ ಸಮಸ್ಯೆ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ | ಹರತಾಳು ಹಾಲಪ್ಪ ನೇತೃತ್ವ…!

ರಿಪ್ಪನ್‌ಪೇಟೆ ಮೆಸ್ಕಾಂ ಕಚೇರಿ ಎದುರು ವಿದ್ಯುತ್ ಸಮಸ್ಯೆ ಖಂಡಿಸಿ ಹರತಾಳು ಹಾಲಪ್ಪ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆ.
ರಿಪ್ಪನ್‌ಪೇಟೆ ಮೆಸ್ಕಾಂ ಕಚೇರಿ ಎದುರು ವಿದ್ಯುತ್ ಸಮಸ್ಯೆ ಖಂಡಿಸಿ ಹರತಾಳು ಹಾಲಪ್ಪ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆ.

ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆ ಹಾಗೂ ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ನಿರಂತರವಾಗಿ ಕಾಡುತ್ತಿರುವ ಅಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ವಿದ್ಯುತ್ ಸಮಸ್ಯೆಗಳನ್ನು ಖಂಡಿಸಿ ಅಕ್ಟೋಬರ್ 23ರಂದು ಶುಕ್ರವಾರ ಬೆಳಿಗ್ಗೆ 10:30ಕ್ಕೆ ರಿಪ್ಪನ್‌ಪೇಟೆಯ ಮೆಸ್ಕಾಂ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮಾಜಿ ಸಚಿವರು ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ರೈತರು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸುವಂತೆ ಮೆಸ್ಕಾಂ ಅಧಿಕಾರಿಗಳನ್ನು ಒತ್ತಾಯಿಸಲಾಗುವುದು.

ರಿಪ್ಪನ್‌ಪೇಟೆ ಹಾಗೂ ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿನ ವ್ಯತ್ಯಯ ಸೇರಿದಂತೆ ವಿವಿಧ ಸಮಸ್ಯೆಗಳಿಂದ ರೈತರು ಮತ್ತು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಕೃಷಿ ಚಟುವಟಿಕೆಗಳು ಹಾಗೂ ದೈನಂದಿನ ಬದುಕಿನ ಮೇಲೆ ಪರಿಣಾಮ ಬೀರುತ್ತಿರುವ ಈ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು, ಶಾಶ್ವತ ಪರಿಹಾರ ಒದಗಿಸುವಂತೆ ಒತ್ತಾಯಿಸುವ ಉದ್ದೇಶದಿಂದ ಈ ಪ್ರತಿಭಟನೆ ಆಯೋಜಿಸಲಾಗಿದೆ.

ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ರೈತರು ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಲಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗಳ ಗಂಭೀರತೆಯನ್ನು ಅರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿದೆ.

ಈ ಹಿನ್ನೆಲೆಯಲ್ಲಿ ಕೆರೆಹಳ್ಳಿ ಹೋಬಳಿಯ ರೈತರು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುಂದರೇಶ್ ಮನವಿ ಮಾಡಿದ್ದಾರೆ.

ರೈತರ ಹಿತದೃಷ್ಟಿ ಹಾಗೂ ಸಾರ್ವಜನಿಕರ ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕಾಗಿ ನಡೆಯಲಿರುವ ಈ ಹೋರಾಟಕ್ಕೆ ಎಲ್ಲರೂ ಕೈಜೋಡಿಸಿ, ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಧ್ವನಿ ಎತ್ತುವಂತೆ ಅವರು ಕರೆ ನೀಡಿದ್ದಾರೆ.



#Karnataka news # bengloore news# state news #ripponpete news # sagara news#shivamogga news Recent news daily news murder news shivamogga murder news hindu murder boy murder Ripponpetenews shivamogganews sagaranews hosanagaranews thirthahalli ews livenews Karnatakanews Ripponpetenews shivamogganews sagaranews hosanagaranews thirthahalli ews livenews Karnatakanews Kannadanews Ripponpetenews shivamogganews sagaranews hosanagaranews thirthahalli ews livenews Karnatakanews Kannadanews tirtahalli news kudumallige grama panchayt Ripponpet news local news rpt news shivamogga news Shivamogga news state news karnataka news




Leave a Reply

Your email address will not be published. Required fields are marked *