
ರಿಪ್ಪನ್ಪೇಟೆ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟವಾಗುತ್ತಿದ್ದಂತೆ ಸ್ಥಳೀಯ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಪಾಳಯಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ನಾನಾ ಲೆಕ್ಕಾಚಾರಗಳು ಆರಂಭವಾಗಿವೆ. ಅದರಲ್ಲೂ ರಿಪ್ಪನ್ಪೇಟೆ ತಾಲೂಕು ಪಂಚಾಯಿತಿ ಕ್ಷೇತ್ರದ ಟಿಕೆಟ್ ಯಾರ ಪಾಲಾಗಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ.
ರಿಪ್ಪನ್ಪೇಟೆ ತಾಲೂಕು ಪಂಚಾಯಿತಿ ಕ್ಷೇತ್ರ ಸಾಮಾನ್ಯ ಮಹಿಳೆಗೆ ಮೀಸಲಾಗಿರುವ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ಪಾಳಯದಲ್ಲಿ ನಾಗರತ್ನ, ದೇವರಾಜ್, ಪದ್ಮಾ, ಸುರೇಶ್ ಸೇರಿದಂತೆ ಹಲವು ಹೆಸರುಗಳು ಕೇಳಿಬರುತ್ತಿದ್ದರೆ, ಕಾಂಗ್ರೆಸ್ ಪಾಳಯದಲ್ಲಿಯೂ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆಗಳು ನಡೆಯುತ್ತಿವೆ.
ಈ ಹಿಂದೆ ಕಾಂಗ್ರೆಸ್ನಿಂದ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಶ್ರೀನಿವಾಸ್ ಆಚಾರ್ ಅವರ ಪತ್ನಿ ಜಯಶ್ರೀ ಆಚಾರ್ ಅವರ ಹೆಸರು ಪ್ರಬಲವಾಗಿ ಕೇಳಿಬಂದಿತ್ತು. ಇದೀಗ ಕಾಂಗ್ರೆಸ್ ವಲಯದಲ್ಲಿ ಮತ್ತೊಂದು ಹೆಸರು ಮುನ್ನೆಲೆಗೆ ಬಂದಿದ್ದು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಧನಲಕ್ಷ್ಮೀ ಅವರು ರಿಪ್ಪನ್ಪೇಟೆ ತಾಲೂಕು ಪಂಚಾಯಿತಿ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದಾರೆ.

ಸ್ಥಳೀಯ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಧನಲಕ್ಷ್ಮೀ ಅವರು ಕಾಂಗ್ರೆಸ್ ಪಕ್ಷದಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ. ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವುದರ ಜೊತೆಗೆ ಶಾಸಕರ ಆಪ್ತ ವಲಯದಲ್ಲಿಯೂ ಗುರುತಿಸಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಧನಲಕ್ಷ್ಮೀ ಅವರಿಗೆ ಈ ಬಾರಿ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಸ್ವತಃ ಶಾಸಕರೇ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲೂ ಹರಿದಾಡುತ್ತಿವೆ. ಆದರೆ ಈ ಬಗ್ಗೆ ಪಕ್ಷದ ಅಧಿಕೃತ ಘೋಷಣೆ ಇನ್ನೂ ಹೊರಬಿದ್ದಿಲ್ಲ.
ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ ಅನುಭವ, ಸ್ಥಳೀಯ ಜನರೊಂದಿಗೆ ಹೊಂದಿರುವ ಒಡನಾಟ ಹಾಗೂ ವಿವಿಧ ಸಮುದಾಯಗಳ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಉತ್ತಮ ಸಂಪರ್ಕ ಹೊಂದಿರುವುದು ಧನಲಕ್ಷ್ಮೀ ಅವರ ರಾಜಕೀಯ ಬಲವೆಂದು ವಿಶ್ಲೇಷಿಸಲಾಗುತ್ತಿದೆ.
ಒಟ್ಟಿನಲ್ಲಿ ರಿಪ್ಪನ್ಪೇಟೆ ತಾಲೂಕು ಪಂಚಾಯಿತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಪೈಪೋಟಿ ಹೆಚ್ಚಾಗುತ್ತಿದ್ದು, ಧನಲಕ್ಷ್ಮೀ ಅವರ ಹೆಸರು ಮುನ್ನೆಲೆಗೆ ಬಂದಿರುವುದು ಸ್ಥಳೀಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಅಂತಿಮವಾಗಿ ಕಾಂಗ್ರೆಸ್ ವರಿಷ್ಠರು ಯಾರಿಗೆ ಮಣೆ ಹಾಕಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.
- ರಿಪ್ಪನ್ಪೇಟೆ ತಾಲೂಕು ಪಂಚಾಯಿತಿ ಕ್ಷೇತ್ರದಲ್ಲಿ ಧನಲಕ್ಷ್ಮೀ ಹೆಸರು ಮುಂಚೂಣಿಗೆ! ಕಾಂಗ್ರೆಸ್ ಟಿಕೆಟ್ಗೆ ಪ್ರಬಲ ಆಕಾಂಕ್ಷಿ?
- ರಿಪ್ಪನ್ಪೇಟೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಉಬೈದುಲ್ಲಾ ಶರೀಫ್ ಕಣಕ್ಕೆ!
- ಉಡಾನ್ 6.0 ಟೆಂಡರ್ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಸೇರ್ಪಡೆ.!
- ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಂಕಪಟ್ಟಿ ಗೊಂದಲ, ಪರೀಕ್ಷಾ ವಿಳಂಬ; ವಿದ್ಯಾರ್ಥಿಗಳ ಸಮಸ್ಯೆ ಖಂಡಿಸಿ ನ.30ಕ್ಕೆ ಬಿಜೆಪಿ ಪ್ರತಿಭಟನೆ – ಕುಕ್ಕೆ ಪ್ರಶಾಂತ್
- ತಮಿಳಿನ ಜನಪ್ರಿಯ ‘ಸೂಪರ್ ಸಿಂಗರ್’ ವೇದಿಕೆಗೆ ಹೊಸನಗರದ ಅಭಿಜಿತ್ ರಾವ್ ಆಯ್ಕೆ!
#Karnataka news # bengloore news# state news #ripponpete news # sagara news#shivamogga news Recent news daily news murder news shivamogga murder news hindu murder boy murder Ripponpetenews shivamogganews sagaranews hosanagaranews thirthahalli ews livenews Karnatakanews Ripponpetenews shivamogganews sagaranews hosanagaranews thirthahalli ews livenews Karnatakanews Kannadanews Ripponpetenews shivamogganews sagaranews hosanagaranews thirthahalli ews livenews Karnatakanews Kannadanews tirtahalli news kudumallige grama panchayt Ripponpet news local news rpt news shivamogga news Shivamogga news state news karnataka news

